ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಇನ್ನಿಂಗ್ಸ್ ಮತ್ತು 140 ರನ್‌ಗಳ ಗೆಲುವು ದಾಖಲಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ದಿನದ ಆಟ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ ತಂಡವು 162 ರನ್ ಮಾತ್ರ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 448 ರನ್ ಗಳಿಸಿದೆ. ಬಳಿಕ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ವೆಸ್ಟ್ ಇಂಡೀಸ್ ತಂಡವನ್ನು ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ಸ್‌ಗೆ ಆಹ್ವಾನ ನೀಡಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಗೆ ಇಳಿದ ವೆಸ್ಟ್ ಇಂಡೀಸ್ ತಂಡವು 146 ರನ್‌ಗೆ ಆಲೌಟ್ ಆಗಿದೆ. ರವೀಂದ್ರ ಜಡೇಜಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಮೊಹಮ್ಮದ್ ಸಿರಾಜ್ ಮೂರು ವಿಕೆಟ್, ಕುಲದೀಪ್ ಯಾವರ್ ಎರಡು ವಿಕೆಟ್ ಕಬಳಿಸಿದರು.
ಭಾರತದ ಮೊದಲ ಇನ್ನಿಂಗ್ಸ್ ನಲ್ಲಿ ಕೆ.ಎಲ್.ರಾಹುಲ್, ಜುರೇಲ್, ಜಡೇಜಾ ಸೇರಿದಂತೆ ಮೂವರು ಸೆಂಚುರಿ ಸಿಡಿಸಿದ್ದಾರೆ. ಈ ಮೂರು ಸೆಂಚುರಿ ಮತ್ತು ಶುಭಮನ್ ಗಿಲ್ ಹಾಫ್ ಸೆಂಚುರಿ ನೆರವಿನಿಂದ ಭಾರತವು 448 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಈ ಗೆಲುವಿನೊಂದಿಗೆ ಶುಭಮನ್ ಗಿಲ್ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ ದೊರಕಿದೆ