ದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಸ್ಪಿನ್ನರ್ ಕುಲದೀಪ್ ಯಾದವ್ ಅವರ ಕೈಚಳಕದ ಮುಂದೆ ವಿಂಡೀಸ್ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು.
ಮೂರನೇ ದಿನದ ಊಟದ ವಿರಾಮದ ಹೊತ್ತಿಗೆ ವೆಸ್ಟ್ ಇಂಡೀಸ್ 8 ವಿಕೆಟ್‌ಗೆ 217 ರನ್ ಗಳಿಸಿದ್ದ ತಂಡವು 248 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ, 270 ರನ್‌ಗಳ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿತು. ಭಾರತ ತಂಡವು ವಿಂಡೀಸ್ ಮೇಲೆ ಫಾಲೋಆನ್ ಹೇರಿದೆ.
ಎರಡನೇ ದಿನದ ಅಂತ್ಯಕ್ಕೆ ವಿಂಡೀಸ್ 140ಕ್ಕೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಇಂದು ಕೂಡ ಭಾರತೀಯ ಬೌಲರ್‌ಗಳ ನಿಖರ ದಾಳಿಯನ್ನು ಎದುರಿಸಲು ಸಾಧ್ಯವಾಗಲಿಲ್ಲ. ಕುಲದೀಪ್ ಐದು ವಿಕೆಟ್ ಪಡೆದು ಮಿಂಚಿದರು.
ಈ ಮೊದಲು ಯಶಸ್ವಿ ಜೈಸ್ವಾಲ್ (175) ಹಾಗೂ ನಾಯಕ ಶುಭಮನ್ ಗಿಲ್ (129*) ಅಮೋಘ ಶತಕದ ಬೆಂಬಲದೊಂದಿಗೆ ಭಾರತ, ಮೊದಲ ಇನಿಂಗ್ಸ್‌ನಲ್ಲಿ ಐದು ವಿಕೆಟ್ ನಷ್ಟಕ್ಕೆ 518 ರನ್ ಗಳಿಸಿ ಡಿಕ್ಲೇರ್ ಘೋಷಿಸಿತ್ತು. ಸಾಯಿ ಸುದರ್ಶನ್ (87), ಧ್ರುವ್ ಜುರೇಲ್ (44) ಹಾಗೂ ನಿತೀಶ್ ರೆಡ್ಡಿ (43) ಸಹ ಉಪಯುಕ್ತ ಕೊಡುಗೆ ನೀಡಿದ್ದರು.
ಅಹಮದಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನಿಂಗ್ಸ್ ಹಾಗೂ 140 ರನ್ ಅಂತರದ ಬೃಹತ್ ಗೆಲುವು ದಾಖಲಿಸಿತ್ತು. ಈಗ ದೆಹಲಿ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್‌ಗೈಯುವ ಛಲದಲ್ಲಿದೆ.