ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯವಾಗಿದೆ.
ದ್ವಿತೀಯ ಇನಿಂಗ್ಸ್ ನಲ್ಲಿ 91 ರನ್ ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಆಸೀಸ್ ಇಂದು 2 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಬಳಿಕ ಉಭಯ ನಾಯಕರ ಸಮ್ಮತಿಯೊಂದಿಗೆ ಪಂದ್ಯ ಡ್ರಾ ಮಾಡಿಕೊಳ್ಳಲಾಯಿತು. ಭಾರತ ಮೊದಲ ಇನಿಂಗ್ಸ್ ನಲ್ಲಿ ಆಸೀಸ್ ಮಾಡಿದ್ದ 480 ರನ್ ಗಳಿಗೆ ಉತ್ತರವಾಗಿ 571 ರನ್ ಗಳಿಸಿತ್ತು.
ಭಾರತ ಈಗಾಗಲೇ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಿದ್ದರಿಂದ ಸರಣಿ ಭಾರತದ ಪಾಲಾಯಿತು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೂ ತಲುಪಿತು. ಈ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠರಾದರೆ, ರವೀಂದ್ರ ಜಡೇಜಾ ಸರಣಿ ಶ್ರೇಷ್ಠರಾದರು.