ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಮತ್ತು ಸರಣಿ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಕಳೆದ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಮತ್ತೆ ಅದೇ ತಂಡದೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯುತ್ತಿದೆ. ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು ಡೇವಿಡ್ ವಾರ್ನರ್, ಆಶ್ತೋನ್ ಅಗರ್ ಕಮ್ ಬ್ಯಾಕ್ ಮಾಡಿದ್ದಾರೆ.
ಈಗಾಗಲೇ ಸರಣಿ 1-1 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಕೈ ವಶ ಮಾಡಿಕೊಳ್ಳಲಿದೆ.