ಭಾರತ-ಆಸ್ಟ್ರೇಲಿಯಾ ಏಕದಿನ: ಶೂನ್ಯದಲ್ಲೇ ದಾಖಲೆ ಮಾಡಿದ ಟೀಂ ಇಂಡಿಯಾ

Webdunia
ಭಾನುವಾರ, 19 ಮಾರ್ಚ್ 2023 (16:43 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದು ಕೇವಲ 117 ರನ್ ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ಆಸೀಸ್ ಬೌಲರ್ ಗಳು ಎದುರಾಳಿಗಳನ್ನು ಉಸಿರೆತ್ತದಂತೆ ನೋಡಿಕೊಂಡರು. ವಿರಾಟ್ ಕೊಹ್ಲಿ 31, ಅಕ್ಸರ್ ಪಟೇಲ್ ಅಜೇಯ 29 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ವಿಫಲರಾದರು. ಸೂರ್ಯಕುಮಾರ್ ಯಾದವ್ ಮೊದಲ ಪಂದ್ಯದಲ್ಲೂ ಶೂನ್ಯಕ್ಕೆ ನಿರ್ಗಮಿಸಿದ್ದರು. ಅದನ್ನೇ ಇಲ್ಲೂ ಮುಂದುವರಿಸಿದರು.

ಒಂದೇ ಇನಿಂಗ್ಸ್ ನಲ್ಲಿ ಒಟ್ಟು ನಾಲ್ವರು ಬ್ಯಾಟಿಗರು ಡಕೌಟ್ ಆಗಿ ಬೇಡದ ದಾಖಲೆ ಮಾಡಿದರು. ಶುಬ್ಮನ್ ಗಿಲ್, ಸೂರ್ಯಕುಮಾರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಶೂನ್ಯಕ್ಕೆ ನಿರ್ಗಮಿಸಿದವರು. ಇದಕ್ಕೂ ಮೊದಲು ಭಾರತ ಐದು ಬಾರಿ ನಾಲ್ವರು ಡಕೌಟ್ ಆದ ಅವಮಾನ ಅನುಭವಿಸಿತ್ತು. ಕೊನೆಯದಾಗಿ  ಈ ರೀತಿ ಆಗಿದ್ದು 2017 ರಲ್ಲಿ  ಶ್ರೀಲಂಕಾ ವಿರುದ್ಧ. ಇಂದಿನ ಪಂದ್ಯದಲ್ಲಿ ಆಸೀಸ್ ಪರ ಮಿಚೆಲ್ ಸ್ಟಾರ್ಕ್ 5 ವಿಕೆಟ್ ಕಬಳಿಸಿದರು. ಇದೀಗ ಆಸೀಸ್ ಗೆಲ್ಲಲು 118 ರನ್ ಗಳಿಸಿದರೆ ಸಾಕಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments