Publish Date: Sun, 26 Nov 2023 (19:28 IST)
Updated Date: Sun, 26 Nov 2023 (19:31 IST)
ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ನೀಡಿದ್ದಾರೆ. ಇದರಿಂದಾಗಿ ಭಾರತ 5 ಓವರ್ ಗಳಲ್ಲೇ 63 ರನ್ ಗಳಿಸಿದೆ. ಜೈಸ್ವಾಲ್ ಕೇವಲ 20 ಎಸೆತಗಳಿಂದ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಇಂದು ಭಾರತ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಅತ್ತ ಆಸ್ಟ್ರೇಲಿಯಾ ಎರಡು ಬದಲಾವಣೆ ಮಾಡಿಕೊಂಡಿದ್ದು, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಆಡಂ ಝಂಪಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭದಲ್ಲೇ ಋತುರಾಜ್ ಗಾಯಕ್ ವಾಡ್ ರನೌಟ್ ಆಗಬೇಕಾಯಿತು. ಆದರೆ ಇಂದಿನ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದೆ. ಕಳೆದ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಇದೀಗ ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ.