ಭಾರತ-ಆಸ್ಟ್ರೇಲಿಯಾ ಟೆಸ್ಟ್: ಪೂಜಾರ ಮಾತು ಕೇಳಿ ವಿಕೆಟ್ ಕಳೆದುಕೊಂಡರೇ ರಿಷಬ್ ಪಂತ್?!

Webdunia
ಗುರುವಾರ, 6 ಡಿಸೆಂಬರ್ 2018 (10:31 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸಂಕಷ್ಟದಲ್ಲಿದೆ.

 
ಟೀಂ ಇಂಡಿಯಾ ಪರ ಚೇತೇಶ್ವರ ಪೂಜಾರ (46) ಬಿಟ್ಟರೆ ಬೇರೆ ಯಾವುದೇ ಬ್ಯಾಟ್ಸ್ ಮನ್ ಗಳೂ ಟೆಸ್ಟ್ ಶೈಲಿಯಲ್ಲಿ ನಿಂತು ಆಡುವ ಪ್ರಯತ್ನ ಮಾಡದೇ ಇರುವುದೇ ಈ ಶೋಚನೀಯ ಸ್ಥಿತಿಗೆ ಕಾರಣವಾಯಿತು.

ರಿಷಬ್ ಪಂತ್ ತಮ್ಮ ಎಂದಿನ ಹೊಡೆ ಬಡಿಯ ಶೈಲಿಯಲ್ಲಿ ಸಿಕ್ಸರ್, ಬೌಂಡರಿ ಚಚ್ಚುತ್ತ ರನ್ ಗಳಿಸುತ್ತಿದ್ದರು. ಆದರೆ ಈ ನಡುವೆ ವಿಕೆಟ್ ಗಳು ಉರುಳುತ್ತಿದ್ದರಿಂದ ಜತೆಯಾಟವಾಡಲು ಕೊಂಚ ನಿಧಾನವಾಗಿ ಆಡಲು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಿರಬೇಕು. ಇದೇ ಕಾರಣಕ್ಕೆ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದ ರಿಷಬ್ ವಿಕೆಟ್ ಕೀಪರ್ ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದ್ದವರಲ್ಲಿ ಪೂಜಾರ ಒಬ್ಬರೇ ನಥಾನ್ ಲಿಯನ್ ಮತ್ತು ಆಸೀಸ್ ನ ಇತರ ವೇಗಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾ, ಪಕ್ಕಾ ಟೆಸ್ಟ್ ಶೈಲಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ ಅವರಿಗೆ ಸೂಕ್ತ ಸಾಥ್ ಸಿಗುತ್ತಿಲ್ಲ ಎನ್ನುವುದೇ ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments