Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ
ಮೆಲ್ಬೋರ್ನ್ , ಶನಿವಾರ, 29 ಡಿಸೆಂಬರ್ 2018 (09:48 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸಮೀಪ ಬಂದು ನಿಂತಿದೆ.


ನಾಲ್ಕನೇ ದಿನ ಚಹಾ ವಿರಾಮದ ವೇಳೆಗೆ ಆಸ್ಟ್ರೇಲಿಯಾ ಭಾರತ ನೀಡಿರುವ 399 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದು, ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿದೆ. ಇದೀಗ ಆಸೀಸ್ ಗೆಲುವಿಗೆ ಇನ್ನೂ 261 ರನ್ ಗಳಿಸಬೇಕಿದೆ. ಆದರೆ ಕೈಯಲ್ಲಿ 5 ವಿಕೆಟ್ ಮಾತ್ರ ಬಾಕಿಯಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಬಳಿಕ ಗೆಲುವಿನ ಗುರಿ ಬೆನ್ನತ್ತಿದ್ದ ಆಸೀಸ್ ಭಾರತೀಯ ಬೌಲರ್ ಗಳ ಸಂಘಟಿತ ದಾಳಿಗೆ ಕುಸಿದು ನಿಂತಿದೆ. ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಕಬಳಿಸಿದ್ದ ಜಸ್ಪ್ರೀತ್ ಬುಮ್ರಾ ದ್ವಿತೀಯ ಇನಿಂಗ್ಸ್ ನಲ್ಲೂ ಈಗ 2 ವಿಕೆಟ್ ಕಿತ್ತಿದ್ದಾರೆ. ಇವರ ಜತೆಗೆ ರವೀಂದ್ರ ಜಡೇಜಾ ಕೂಡಾ 2 ವಿಕೆಟ್, ಮೊಹಮ್ಮದ್ ಶಮಿ 1 ವಿಕೆಟ್ ಗಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ಕ್ರಿಕೆಟಿಗರ ವಿರುದ್ಧ ಜನಾಂಗೀಯ ನಿಂದನೆ ಮಾಡುತ್ತಿರುವ ಆಸಿಸ್ ಅಭಿಮಾನಿಗಳಿಗೆ ತಕ್ಕ ಶಾಸ್ತಿ