Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಮಹಿಳೆಯರ ಟೆಸ್ಟ್: ದಾಖಲೆಯ ಮೊತ್ತ ಪೇರಿಸಿ ಆಲೌಟ್ ಆದ ಭಾರತ

Webdunia
ಶನಿವಾರ, 23 ಡಿಸೆಂಬರ್ 2023 (10:29 IST)
ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವನಿತೆಯರ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಮೊದಲ ಇನಿಂಗ್ಸ್ ನಲ್ಲಿ ಭಾರತ 406 ರನ್ ಗಳಿಸಿ ಆಲೌಟ್ ಆಗಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 219 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ 187 ರನ್ ಗಳ ಬೃಹತ್ ಮುನ್ನಡೆ ಸಿಕ್ಕಿದೆ. ಅಲ್ಲದೆ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳೆಯರ ಟೆಸ್ಟ್ ಪಂದ್ಯದಲ್ಲಿ ಭಾರತದ ದಾಖಲಿಸಿದ ಗರಿಷ್ಠ ಟೋಟಲ್ ಇದಾಗಿದೆ.

ನಿನ್ನೆ 7 ವಿಕೆಟ್ ನಷ್ಟಕ್ಕೆ 376 ರನ್ ಗಳಿಗೆ ದಿನದಾಟ ಮುಗಿಸಿದ್ದ ಭಾರತ ಇಂದು 30 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಿನ್ನೆಯ ದಿನದಂತ್ಯಕ್ಕೆ 70 ರನ್ ಗಳಿಸಿ ಅಜೇಯರಾಗುಳಿದಿದ್ದ ದೀಪ್ತಿ ಶರ್ಮಾ ಇಂದು  ಮತ್ತೆ 8 ರನ್ ಗಳಿಸಿ ಔಟಾದರು. 30 ರನ್ ಗಳಿಸಿ ಅಜೇಯರಾಗಿದ್ದ ಪೂಜಾ ವಸ್ತ್ರಾಕರ್ 47 ರನ್ ಗಳಿಸಿ ಔಟಾದರು.

ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ನಷ್ಟಿವಲ್ಲದೇ 5 ರನ್ ಗಳಿಸಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಈ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಪಡೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments