Select Your Language

Notifications

webdunia
webdunia
webdunia
webdunia

ಪಾಕಿಸ್ತಾನವನ್ನು ಮಣಿಸಿ ವಿಶ್ವಕಪ್ ಗೆದ್ದ ಭಾರತದ ಹುಡುಗರು!

ಪಾಕಿಸ್ತಾನವನ್ನು ಮಣಿಸಿ ವಿಶ್ವಕಪ್ ಗೆದ್ದ ಭಾರತದ ಹುಡುಗರು!
Bangalore , ಭಾನುವಾರ, 12 ಫೆಬ್ರವರಿ 2017 (16:26 IST)
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಅಂಧರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಜಯಭೇರಿ ಭಾರಿಸಿದೆ. ಈ ಮೂಲಕ ಸತತ ಎರಡನೇ ಬಾರಿ ವಿಶ್ವಕಪ್ ಗೆದ್ದ ಸಾಧನೆ ನಮ್ಮದಾಗಿದೆ.

 
ಇಂದು ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 9 ವಿಕೆಟ್ ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 9 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು.

ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಭಾರತ 5 ಓವರ್ ಗಳಲ್ಲೇ 50 ರನ್ ಗಳ ಗಡಿ ದಾಟಿದ್ದು ವಿಶೇಷವಾಗಿತ್ತು. ಇದು ಭಾರತಕ್ಕೆ ಎರಡನೇ ವಿಶ್ವಕಪ್ ಗೆಲುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ವಿಶ್ವ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್