Publish Date: Fri, 05 Feb 2021 (08:42 IST)
Updated Date: Fri, 05 Feb 2021 (08:44 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯಲಿದೆ.
ಕೊರೋನಾ ಬಳಿಕ ಭಾರತದಲ್ಲಿ ಮೊದಲ ಬಾರಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಇದಾಗಿದೆ. ಹೀಗಾಗಿ ಕ್ರಿಕೆಟ್ ಪ್ರಿಯ ಭಾರತೀಯರಲ್ಲಿ ಉತ್ಸಾಹ ಹೆಚ್ಚಿದೆ. ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಭಾರತಕ್ಕೆ ಈ ಸರಣಿ ಗೆಲುವು ಮಹತ್ವದ್ದಾಗಲಿದೆ. ಅತ್ತ ಇಂಗ್ಲೆಂಡ್ ಕೂಡಾ ವಿಶ್ವಚಾಂಪಿಯನ್ ಶಿಪ್ ರೇಸ್ ನಲ್ಲಿ ಉಳಿದುಕೊಳ್ಳಲು ಭಾರತಕ್ಕೆ ಪೈಪೋಟಿ ಒಡ್ಡಲಿದೆ. ಮೊದಲ ಬಾರಿಗೆ ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ ಭಾರತದಲ್ಲಿ ಸರಣಿ ಆಡುತ್ತಿದೆ.