Publish Date: Tue, 12 Jul 2022 (17:06 IST)
Updated Date: Tue, 12 Jul 2022 (17:08 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಗಾಯದ ಕಾರಣದಿಂದ ಆಡುತ್ತಿಲ್ಲ. ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಶಿಖರ್ ಧವನ್ ಕಣಕ್ಕಿಳಿಯುತ್ತಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಬಲ ತುಂಬಲಿದ್ದಾರೆ. ಪಿಚ್ ಆರಂಭದಲ್ಲಿ ಬೌಲರ್ ಗಳಿಗೆ ಸಹಾಯಕವಾಗುವಂತೆ ತೋರುತ್ತಿದ್ದು ಈ ಕಾರಣಕ್ಕೆ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್.