Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ವನಿತೆಯರ ಟಿ20 ಸರಣಿ ಇಂದಿನಿಂದ

ಭಾರತ-ಇಂಗ್ಲೆಂಡ್ ವನಿತೆಯರ ಟಿ20 ಸರಣಿ ಇಂದಿನಿಂದ
ಮುಂಬೈ , ಬುಧವಾರ, 6 ಡಿಸೆಂಬರ್ 2023 (10:30 IST)
Photo Courtesy: Twitter
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ವನಿತೆಯರ ನಡುವೆ ಇಂದಿನಿಂದ ಟಿ20 ಸರಣಿ ಆರಂಭವಾಗಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧ ಇಂದಿನಿಂದ ವನಿತೆಯರು ಮೂರು ಟಿ20 ಪಂದ್ಯಗಳ ಸರಣಿ ಆಡಲಿದ್ದಾರೆ. ಟಿ20 ಪಂದ್ಯಗಳಲ್ಲಿ ಭಾರತ ವನಿತೆಯರು ಇತ್ತೀಚೆಗೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಇದೀಗ ತಂಡಕ್ಕೆ ಡಬ್ಲ್ಯುಪಿಎಲ್ ನಿಂದ ಬಂದ ಕೆಲವು ಹೊಸ ತಾರೆಗಳು ಆಗಮಿಸಿದ್ದಾರೆ. ಹೀಗಾಗಿ ಭಾರತ ಮಹಿಳಾ ತಂಡದಲ್ಲೂ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗುತ್ತಿದೆ. ಆದರೆ ಇಂಗ್ಲೆಂಡ್ ವಿರುದ್ಧ ಭಾರತದ ದಾಖಲೆ ಉತ್ತಮವಾಗಿಲ್ಲ. ಹೀಗಾಗಿ ಅದನ್ನು ಸರಿಪಡಿಸಲು ಭಾರತಕ್ಕೆ ಇದು ಉತ್ತಮ ಅವಕಾಶ.

ನಾಯಕಿ ಹರ್ಮನ್ ಪ್ರೀತ್ ಕೌರ್ ಇದುವರೆಗೆ ಅದ್ಧುತ ನಾಯಕತ್ವದ ಮೂಲಕ ಗಮನ ಸೆಳೆದಿದ್ದಾರೆ. ಅವರಿಗೆ ಜೊತೆಯಾಗಿ ಸ್ಮೃತಿ ಮಂಧನಾ, ಶಫಾಲಿ ವರ್ಮ, ಜೆಮಿಮಾ ರೊಡ್ರಿಗಸ್ ಬ್ಯಾಟಿಂಗ್ ಶಕ್ತಿಯಾಗಿ ನಿಲ್ಲಲಿದ್ದಾರೆ. ಬೌಲಿಂಗ್ ನಲ್ಲಿ ಡಬ್ಲ್ಯುಪಿಎಲ್ ನಿಂದ ಬೆಳಕಿಗೆ ಬಂದ ಶ್ರೇಯಾಂಕ ಪಾಟೀಲ್, ಸೈಕಾ ಐಶಾಕ್ ಮುಂತಾದವರು ತಂಡಕ್ಕೆ ಬಲ ತುಂಬಲಿದ್ದಾರೆ. ಎಲ್ಲಾ ಪಂದ್ಯಗಳು ರಾತ್ರಿ 7.30 ಕ್ಕೆ ಆರಂಭವಾಗಲಿದ್ದು, ಜಿಯೋ ಸಿನಿಮಾ ಆಪ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

India-S Africa cricket series: ಭಾರತ-ದ.ಆಫ್ರಿಕಾ ಸರಣಿಯ ಪೂರ್ತಿ ವೇಳಾಪಟ್ಟಿ ಇಲ್ಲಿದೆ