Webdunia - Bharat's app for daily news and videos

Install App

ಮಹಿಳೆಯರ ಟಿ20 ಏಷ್ಯಾಕಪ್‌ನಲ್ಲಿ ಭಾರತ ತಂಡಕ್ಕೆ ಇಂದು ಯುಎಇ ಸವಾಲು

Sampriya
ಭಾನುವಾರ, 21 ಜುಲೈ 2024 (10:09 IST)
Photo Courtesy X
ಶ್ರೀಲಂಕಾ: ಹಾಲಿ ಚಾಂಪಿಯನ್‌ ಭಾರತ ಮಹಿಳೆಯರ ತಂಡವು ಇಲ್ಲಿ ನಡೆಯುತ್ತಿರುವ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡವನ್ನು ಎದುರಿಸಲಿದೆ.

ಹರ್ಮನ್‌ಪ್ರೀತ್‌ ಕೌರ್‌ ಪಡೆಯು ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯ ಗಳಿಸಿತ್ತು. ಇದೀಗ ಯುಎಇ ವಿರುದ್ಧ ಸುಲಭ ಜಯ ಸಾಧಿಸಿ, ಸೆಮಿಫೈನಲ್ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ.

ಅನುಭವ ಮತ್ತು ಸಾಮರ್ಥ್ಯದಲ್ಲಿ ಭಾರತ ತಂಡವು ಯುಎಇಗಿಂತ ಬಲಿಷ್ಠವಾಗಿದೆ. ಮಧ್ಯಮವೇಗಿ ಪೂಜಾ ವಸ್ತ್ರಕರ್, ಸ್ಪಿನ್ನರ್ ದೀಪ್ತಿ ಶರ್ಮಾ ಹಾಗೂ ರೇಣುಕಾ ಸಿಂಗ್ ಅವರು ಉತ್ತಮ ಲಯದಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಪಾಕ್ ತಂಡವು ಸಾಧಾರಣ ಮೊತ್ತಕ್ಕೆ ಕುಸಿಯಲು ಈ ಮೂವರ ಬೌಲಿಂಗ್ ಕಾರಣವಾಗಿತ್ತು.

ಭಾರತೀಯ ಮೂಲದ ಆಟಗಾರ್ತಿಯರು ಹೆಚ್ಚಿನ ಸಂಖ್ಯೆಯಲ್ಲಿರುವ ಯುಎಇ ಕಠಿಣ ಪೈಪೋಟಿ ಯೊಡ್ಡುವ ವಿಶ್ವಾಸದಲ್ಲಿದೆ.  ಇಶಾ ರೋಹಿತ್ ಓಜಾ ನಾಯಕತ್ವದ ತಂಡವು ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಸೋತಿತ್ತು.  ಆ ಪಂದ್ಯದಲ್ಲಿ ಕವಿಶಾ ಎಗಡೊಗೆ ಆಲ್‌ರೌಂಡ್ ಆಟವಾಡಿದ್ದರು. ಖುಷಿ ಶರ್ಮಾ ಅವರು ಉತ್ತಮ ಬ್ಯಾಟಿಂಗ್ ಮಾಡಿದ್ದರು. ಭಾರತ ತಂಡದ ವಿರುದ್ಧವೂ ಮಿಂಚುವ ಛಲದಲ್ಲಿದ್ಧಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments