Webdunia - Bharat's app for daily news and videos

Install App

ಸ್ಮೃತಿ ಮಂದಾನ ಶತಕದ ಹೊರತಾಗಿಯೂ ಸೋತ ಭಾರತ: ಆಸ್ಟ್ರೇಲಿಯಾ ಕ್ಲೀನ್‌ ಸ್ವೀಪ್‌

Sampriya
ಬುಧವಾರ, 11 ಡಿಸೆಂಬರ್ 2024 (18:22 IST)
Photo Courtesy X
ಪರ್ತ್: ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಶತಕದ ಹೊರತಾಗಿಯೂ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 83 ರನ್ ಗಳಿಂದ ಪರಾಭವಗೊಂಡಿದೆ.

ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 3-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾರತದ ಪರ ಉಪನಾಯಕಿ ಸ್ಮೃತಿ ಮಂದಾನ ಶತಕ ಗಳಿಸಿದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ.

ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಅನ್ನಾಬೆಲ್ ಸದರ್‌ಲ್ಯಾಂಡ್‌ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 298 ರನ್‌ಗಳ ಸವಾಲಿನ ಮೊತ್ತ ಪೇರಿಸಿತು. ಸದರ್‌ಲ್ಯಾಂಡ್ 95 ಎಸೆತಗಳಲ್ಲಿ 110 ರನ್ (9 ಬೌಂಡರಿ, 4 ಸಿಕ್ಸರ್) ಗಳಿಸಿದರು. ಭಾರತದ ಪರ ಆರುಂಧತಿ ರೆಡ್ಡಿ ನಾಲ್ಕು ವಿಕೆಟ್ ಗಳಿಸಿದರು.

ಈ ಗುರಿ ಬೆನ್ನಟ್ಟಿದ ಭಾರತ ಮಂದಾನ ಶತಕದ ಹೊರತಾಗಿಯೂ 45.1 ಓವರ್‌ಗಳಲ್ಲಿ 215 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಏಕದಿನದಲ್ಲಿ ಒಂಬತ್ತನೇ ಶತಕ ಗಳಿಸಿದ ಮಂದಾನ, 109 ಎಸೆತಗಳಲ್ಲಿ 105 ರನ್ (14 ಬೌಂಡರಿ, 1 ಸಿಕ್ಸರ್) ಗಳಿಸಿ ಔಟ್ ಆದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 12 ರನ್ ಗಳಿಸಿ ಔಟ್ ಆದರು.

ಆಸ್ಟ್ರೇಲಿಯಾದ ಪರ ಬೌಲಿಂಗ್‌ನಲ್ಲೂ ಮಿಂಚಿದ ಆಶ್ಲೀ ಗಾರ್ಡ್ನರ್ 30 ರನ್ ತೆತ್ತು ಐದು ವಿಕೆಟ್ ಗಳಿಸಿ ಮಿಂಚಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments