ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದ ಊಟದ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 56 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟ ಸ್ಥಿತಿಯಲ್ಲಿದೆ.
ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಊಟದ ವಿರಾಮಕ್ಕೆ ಮೊದಲು ಮತ್ತೊಂದು ವಿಕೆಟ್ ಕಳೆದುಕೊಂಡಿದೆ. ಅಜಿಂಕ್ಯಾ ರೆಹಾನೆ 18 ರನ್ ಗೆ ವಿಕೆಟ್ ಕಳೆದುಕೊಂಡಿದ್ದಾರೆ. ರೋಹಿತ್ ಶರ್ಮಾ 15 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ರೆಹಾನೆ ವಿಕೆಟ್ ರಾಬಿನ್ಸನ್ ಪಾಲಾಗಿದೆ. ಉಳಿದ ಮೂರೂ ವಿಕೆಟ್ ಗಳನ್ನು ಸ್ಟಾರ್ ವೇಗಿ ಜೇಮ್ಸ್ ಆಂಡರ್ಸನ್ ಕಬಳಿಸಿದ್ದಾರೆ.