ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಇಂದು ಎರಡನೇ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.
ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಜಯ ಗಳಿಸಿ ಟೀಂ ಇಂಡಿಯಾ ಟೂರ್ನಿಯಲ್ಲಿ ಭರ್ಜರಿ ಓಪನಿಂಗ್ ಪಡೆದಿತ್ತು. ಇಂದು ದುರ್ಬಲ ಎದುರಾಳಿ ನೆದರ್ಲ್ಯಾಂಡ್ ವಿರುದ್ಧ ಆಡಲಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ಇಂದು ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.
ಅತ್ತ ಸ್ಕಾಟ್ ಎಡ್ವರ್ಡ್ ನೇತೃತ್ವದ ನೆದರ್ಲ್ಯಾಂಡ್ಸ್ ಪ್ರತಿಭಾವಂತರ ತಂಡವನ್ನೇ ಒಳಗೊಂಡಿದೆ. ಹೀಗಾಗಿ ಉತ್ತಮ ಪೈಪೋಟಿ ನೀಡಬಹುದು ಎಂದು ನಿರೀಕ್ಷಿಸಲಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ 12.30 ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್ ಸ್ಟಾರ್ ಆಪ್ ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.
-Edited by Rajesh Patil