Publish Date: Tue, 04 Feb 2020 (12:17 IST)
Updated Date: Tue, 04 Feb 2020 (12:19 IST)
ಹ್ಯಾಮಿಲ್ಟನ್: ಟಿ20 ಸರಣಿಯಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಳೆಯಿಂದ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನ ಮುಂದುವರಿಸುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ.
ನಾಳೆಯಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಹ್ಯಾಮಿಲ್ಟನ್ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 7.30 ಕ್ಕೆ ಆರಂಭವಾಗಲಿದ್ದು, ಬೆಳಿಗ್ಗೆಯೇ ಪಂದ್ಯ ನೋಡಲು ಸಿದ್ಧರಾಗಬಹುದು.
ರೋಹಿತ್ ಶರ್ಮಾ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಅವರ ಸ್ಥಾನದಲ್ಲಿ ಯುವ ಕ್ರಿಕೆಟಿಗ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಟೀಂ ಇಂಡಿಯಾದಲ್ಲಿ ಸ್ಥಾನ ಗಟ್ಟಿಗೊಳಿಸಲು ಯುವ ಆಟಗಾರನಿಗೆ ಉತ್ತಮ ಅವಕಾಶ ಸಿಗಲಿದೆ. ಮತ್ತೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೇ ಮುಂದವರಿಯಲಿದ್ದು, ಮಧ್ಯಮ ಕ್ರಮಾಂಕಕ್ಕೆ ಆಸ್ತಿಯಾಗಲಿದ್ದಾರೆ. ಹಾಗಿದ್ದರೂ ರೋಹಿತ್ ಅನುಪಸ್ಥಿತಿಯಲ್ಲಿ ಕೊಹ್ಲಿ ಮತ್ತು ರಾಹುಲ್ ಮೇಲೆ ಹೆಚ್ಚಿನ ಹೊಣೆಗಾರಿಕೆ ಬೀಳಲಿದೆ. ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.