ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಕಾಟ ಶುರುವಾಗಿದೆ. ಇದರಿಂದಾಗಿ ಪಂದ್ಯ ಅರ್ಧಕ್ಕೆ ಸ್ಥಗಿತಗೊಂಡಿದೆ.
ಇಂದೂ ಕೂಡಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಮಳೆ ಬರುವ ಮೊದಲು 4.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಸಿತ್ತು. ಶುಬ್ನಂ ಗಿಲ್ 19, ಶಿಖರ್ ಧವನ್ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಬದಲು ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ. ಶ್ರಾದ್ಧೂಲ್ ಠಾಕೂರ್ ಬದಲಿಗೆ ದೀಪಕ್ ಚಹರ್ ಗೆ ಸ್ಥಾನ ನೀಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆಯಿಲ್ಲ.