Publish Date: Sun, 26 Jan 2020 (08:56 IST)
Updated Date: Sun, 26 Jan 2020 (08:58 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಆಕ್ಲೆಂಡ್ ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಗಣರಾಜ್ಯೋತ್ಸವ ದಿನವಾದ ಇಂದು ಟೀಂ ಇಂಡಿಯಾ ಗೆಲುವಿನ ನಿರೀಕ್ಷೆಯಲ್ಲಿದೆ.
ಮೊದಲ ಪಂದ್ಯದಲ್ಲಿ ದಾಖಲೆಯ ರನ್ ಚೇಸಿಂಗ್ ಮಾಡಿ ಗೆದ್ದ ಟೀಂ ಇಂಡಿಯಾ ಈ ಪಂದ್ಯವನ್ನೂ ಗೆದ್ದು ಐದು ಪಂದ್ಯಗಳ ಸರಣಿಯಲ್ಲಿ ಮಹತ್ವದ ಮುನ್ನಡೆ ಸಾಧಿಸುವ ನಿರೀಕ್ಷೆಯಲ್ಲಿದ್ದಾರೆ.
ಈ ಪಂದ್ಯಕ್ಕೆ ಭಾರತ ತನ್ನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ‍್ಯತೆಯಿಲ್ಲ. ಆದರೆ ಬೌಲಿಂಗ್ ವಿಭಾಗದಲ್ಲಿ ಮೊದಲ ಪಂದ್ಯದಲ್ಲಿ ವಿಕೆಟ್ ಕೀಳಲು ಬೌಲರ್ ಗಳು ವಿಫಲರಾಗಿದ್ದರೂ ಇಂತಹ ಸಪಾಟೆ ಪಿಚ್ ನಲ್ಲಿ ಅದನ್ನು ನಿರೀಕ್ಷಿಸುವುದೂ ತಪ್ಪಾಗುತ್ತದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ 12.20 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.