Publish Date: Sun, 20 Nov 2022 (07:20 IST)
Updated Date: Sun, 20 Nov 2022 (07:34 IST)
ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯ ಇಂದು ಬೇ ಓವಲ್ ಮೈದಾನದಲ್ಲಿ ನಡೆಯಲಿದೆ.
ಮೊದಲ ಪಂದ್ಯ ಶುಕ್ರವಾರ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಇಂದು ಮತ್ತು ಅಂತಿಮ ಪಂದ್ಯವನ್ನು ಗೆದ್ದರೆ ಮಾತ್ರ ಯಾವುದೇ ತಂಡ ಸರಣಿ ಗೆಲ್ಲಬಹುದಾಗಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾದ ಯುವ ಆಟಗಾರರು ಭವಿಷ್ಯದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಇದು ವೇದಿಕೆಯಾಗಲಿದೆ. ಟಿ20 ವಿಶ್ವಕಪ್ ಸೋಲಿನ ಬಳಿಕ ಅನುಭವಿ ಆಟಗಾರರನ್ನು ಟಿ20 ತಂಡದಿಂದ ಹೊರಗಿಡಲು ಬಿಸಿಸಿಐ ಯೋಜನೆ ರೂಪಿಸುತ್ತಿರುವಾಗ ಈ ಸರಣಿ ಯುವ ಆಟಗಾರರ ಪಾಲಿಗೆ ಮಹತ್ವದ್ದಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.