Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಭಾರತ-ಪಾಕ್ ಪಂದ್ಯಕ್ಕೆ ಕ್ಷಣಗಣನೆ

ಟಿ20 ವಿಶ್ವಕಪ್: ಭಾರತ-ಪಾಕ್ ಪಂದ್ಯಕ್ಕೆ ಕ್ಷಣಗಣನೆ
ಮೆಲ್ಬೋರ್ನ್ , ಶನಿವಾರ, 22 ಅಕ್ಟೋಬರ್ 2022 (16:35 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ನಾಳೆ ಮೊದಲ ಪಂದ್ಯವಾಡಲಿರುವ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಮೊದಲ ಪಂದ್ಯದಲ್ಲೇ ಪಾಕ್ ಎದುರಾಳಿಯಾಗಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಇತ್ತೀಚೆಗಿನ ದಿನಗಳಲ್ಲಿ ಪಾಕ್ ತಂಡವೂ ಪ್ರಬಲವಾಗಿರುವುದರಿಂದ ಭಾರತಕ್ಕೆ ಕಠಿಣ ಪೈಪೋಟಿಯಿರಲಿದೆ.

ಕಳೆದ ಬಾರಿ ಏಷ್ಯಾ ಕಪ್ ನಲ್ಲಿ ಭಾರತ-ಪಾಕಿಸ್ತಾನ ಎರಡು ಬಾರಿ ಮುಖಾಮುಖಿಯಾಗಿತ್ತು. ಈ ಟೂರ್ನಿಯಲ್ಲಿ ಪಾಕ್ ಪ್ರಮುಖ ವೇಗಿ ಶಾಹಿನ್ ಅಫ್ರಿದಿ ಅನುಪಸ್ಥಿತಿ ತಂಡಕ್ಕೆ ಕಾಡಿತ್ತು. ಆದರೆ ಈಗ ಅವರು ಕಮ್ ಬ್ಯಾಕ್ ಮಾಡಿದ್ದು, ಟೀಂ ಇಂಡಿಯಾ ಬ್ಯಾಟಿಗರಿಗೆ ಅದರಲ್ಲೂ ವಿಶೇಷವಾಗಿ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್ ಗೆ ಕಠಿಣ ಸವಾಲೊಡ್ಡಲಿದ್ದಾರೆ.


-Edited by Rajesh Patil
ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್, ಕೊಹ್ಲಿ, ಹಾರ್ದಿಕ್ ಪಾಂಡ್ಯ ಫಾರ್ಮ್ ಪ್ಲಸ್ ಪಾಯಿಂಟ್ ಆಗಿದೆ. ಆದರೆ ಬೌಲಿಂಗ್ ನಲ್ಲಿ ಬುಮ್ರಾ ಅನುಪಸ್ಥಿತಿ ಕಾಡಲಿದೆ. ಮೊಹಮ್ಮದ್ ಶಮಿ ಆ ಸ್ಥಾನವನ್ನು ನಿಭಾಯಿಸಬೇಕಿದೆ. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್ ಸ್ಟಾರ್ ಆಪ್ ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಸಿಐ ಏನು ಹೇಳುತ್ತೋ ಅದನ್ನೇ ಮಾಡ್ತೀವಿ: ರೋಹಿತ್ ಶರ್ಮಾ