ಆಂಟಿಗುವಾ: ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.
ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಭಾರತದ ಸಂಘಟಿತ ಬೌಲಿಂಗ್ ಗೆ ತತ್ತರಿಸಿ 37.1 ಓವರ್ ಗಳಲ್ಲಿ 111 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ರವಿಕುಮಾರ್ 3, ವಿಕ್ಕಿ ಓಸ್ಟ್ವಾಲ್ 2, ಕೌಶಲ್ ತಾಂಬೆ, ರಘುವಂಶಿ ಮತ್ತು ರಾಜವರ್ಧನ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.
ಈ ಸುಲಭ ಮೊತ್ತ ಬೆನ್ನತ್ತಿದ ಭಾರತ ಆರಂಭದಲ್ಲೇ ಹಮೂರ್ ಸಿಂಗ್ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ ರಘುವಂಶಿ 44,ಶೇಖ್ ರಶೀದ್ 26, ನಾಯಕ ಯಶ್ ಧುಲ್ 20 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಭಾರತ 30.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!