Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ನಿರ್ಣಾಯಕ ಟೆಸ್ಟ್ ಇಂದಿನಿಂದ

ಭಾರತ-ದ.ಆಫ್ರಿಕಾ ನಿರ್ಣಾಯಕ ಟೆಸ್ಟ್ ಇಂದಿನಿಂದ
ಕೇಪ್ ಟೌನ್ , ಮಂಗಳವಾರ, 11 ಜನವರಿ 2022 (08:50 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.

ಈ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಸರಣಿ ಈಗಾಗಲೇ 1-1 ರಲ್ಲಿ ಸಮಬಲಗೊಂಡಿದ್ದು, ಭಾರತ ಈ ಪಂದ್ಯವನ್ನು ಗೆದ್ದು ಕಾಮನಬಿಲ್ಲಿನ ನಾಡಿನಲ್ಲಿ ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿದೆ.

ಟೀಂ ಇಂಡಿಯಾಕ್ಕೆ ನಾಯಕ ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿರುವುದು ಹೊಸ ಉತ್ಸಾಹ ತಂದಿದೆ. ಇದರಿಂದಾಗಿ ಹನುಮ ವಿಹಾರಿ ಸ್ಥಾನ ಕಳೆದುಕೊಳ್ಳಬೇಕಾಗಬಹುದು. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್‍ ಸ್ಥಾನಕ್ಕೆ ಇಶಾಂತ್ ಶರ್ಮಾ ಕಮ್ ಬ್ಯಾಕ್ ಮಾಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಅದರ ಹೊರತಾಗಿ ತಂಡದಲ್ಲಿ ಬೇರೆ ಯಾವುದೇ ಬದಲಾವಣೆ ಸಾಧ‍್ಯತೆಯಿಲ್ಲ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಚ್ ದ್ರಾವಿಡ್ ಗೆ ಈಗ ಬ್ಯಾಟಿಗರೇ ತಲೆನೋವು