Daily Horoscope
✕

India-S Africa T20I: ಭಾರತ-ದ.ಆಫ್ರಿಕಾ ದ್ವಿತೀಯ ಟಿ20 ಇಂದು

Webdunia
ಮಂಗಳವಾರ, 12 ಡಿಸೆಂಬರ್ 2023 (08:14 IST)
ಓವಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಸೈಂಟ್ ಜಾರ್ಜ್ ಓವಲ್ ಮೈದಾನದಲ್ಲಿ ನಡೆಯಲಿದೆ.
 

ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು. ಟಾಸ್ ಕೂಡಾ ನಡೆಯದೇ ಪಂದ್ಯ ರದ್ದು ಮಾಡಬೇಕಾಗಿ ಬಂದಿತ್ತು. ಟೀಂ ಇಂಡಿಯಾ ಇಲ್ಲಿಗೆ ಕಾಲಿಟ್ಟಾಗಲೇ ಮಳೆಯ ಸ್ವಾಗತ ಸಿಕ್ಕಿತ್ತು. ಇದೀಗ ಎರಡನೇ ಪಂದ್ಯಕ್ಕೂ ಮಳೆಯ ಭೀತಿಯಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಪಡೆಗೆ ಇದು ಮೊದಲ ವಿದೇಶೀ ಸರಣಿ. ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಗೆದ್ದು ಬೀಗಿದ್ದ ಸೂರ್ಯ ಪಡೆಗೆ ಈಗ ಆಫ್ರಿಕಾ ನಾಡಿನಲ್ಲಿ ಗೆಲ್ಲುವ ತವಕವಿತ್ತು.

ಆದರೆ ಮಳೆಯ ಭೀತಿ ಪಂದ್ಯಕ್ಕೆ ಕಾಡಿದೆ. ಇದೀಗ ಸರಣಿಯಲ್ಲಿ ಎರಡೇ ಪಂದ್ಯ ಬಾಕಿಯುಳಿದಿದೆ. ಒಂದು ವೇಳೆ ಸರಣಿ ಗೆಲ್ಲಬೇಕಾದರೆ ಯಾವುದೇ ತಂಡವಾದರೂ ಎರಡೂ ಪಂದ್ಯಗಳನ್ನು ಗೆಲ್ಲಬೇಕಿದೆ. ಒಂದರಲ್ಲಿ ಸೋತರೂ ಸರಣಿ ಸಮಬಲವಾಗಲಿದೆ. ಭಾರತೀಯ ಕಾಲಮಾನ ಪ್ರಕಾರ ಈ ಪಂದ್ಯ ರಾತ್ರಿ 8.30 ಕ್ಕೆ ಆರಂಭವಾಗಲಿದೆ. ಸ್ಪೋರ್ಟ್ಸ್ 18 ವಾಹಿನಿ ಅಥವಾ ಜಿಯೋ ಸಿನಿಮಾದಲ್ಲಿ ನೇರಪ್ರಸಾರವಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments