ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಕಾಮನಬಿಲ್ಲಿನ ನಾಡಿನಲ್ಲಿ ಭಾರತ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ.
ದ.ಆಫ್ರಿಕಾದಲ್ಲಿ ಇದುವರೆಗೆ ಟೀಂ ಇಂಡಿಯಾಗೆ ಟೆಸ್ಟ್ ಸರಣಿ ಗೆಲುವು ಕನಸಾಗಿಯೇ ಉಳಿದಿದೆ. ಇದನ್ನು ನನಸು ಮಾಡಿಕೊಳ್ಳುವ ಸುವರ್ಣಾವಕಾಶ ಈಗ ಕೊಹ್ಲಿ ಬಳಗಕ್ಕಿದೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೆಸ್ಟ್ ಸರಣಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನವನ್ನೇ ನೀಡುತ್ತಾ ಬಂದಿದೆ. ಹೀಗಾಗಿ ಈ ಬಾರಿ ಐತಿಹಾಸಿಕ ದಾಖಲೆ ಮಾಡುವ ಉತ್ಸಾಹದಲ್ಲಿದೆ. ಈ ಪಂದ್ಯ ಸೆಂಚೂರಿಯನ್ ನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.