Webdunia - Bharat's app for daily news and videos

Install App

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸ್ಮೃತಿ ಮಂದಾನ ಶತಕ: ಹಲವು ದಾಖಲೆಗಳು ಉಡೀಸ್‌

Sampriya
ಭಾನುವಾರ, 16 ಜೂನ್ 2024 (18:59 IST)
Photo Courtesy X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಆರನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಹಲವು ದಾಖಲೆ ನಿರ್ಮಿಸಿದ್ದಾರೆ.

ಮಹಿಳೆಯರ ಏಕದಿನ ಕ್ರಿಕೆಟ್​​ನಲ್ಲಿ ಆರನೇ ಶತಕ ಸಿಡಿಸಿದ ಸ್ಮೃತಿ ಮಂದಾನ, ಇದೇ ಮೊದಲ ಬಾರಿಗೆ ತವರಿನ ಮೈದಾನದಲ್ಲಿ ಶತಕ ಸಿಡಿಸಿದ್ದಾರೆ. ಹರ್ಮನ್​ಪ್ರೀತ್ ಕೌರ್ ದಾಖಲೆಯನ್ನೂ ಮುರಿದಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಎಡಗೈ ಬ್ಯಾಟ್ಸ್‌ಮನ್ ಸ್ಮೃತಿ ಮಂದಾನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7000 ರನ್ ಗಡಿ ದಾಟಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. 59 ರನ್ ಗಳಿಸಿದಾಗ ಈ ದಾಖಲೆ ಬರೆದರು.

 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಥಾಲಿ ರಾಜ್ ಬಳಿಕ 7000 ರನ್‌ಗಳ ಗಡಿ ದಾಟಿದ ಭಾರತದ ಮಹಿಳಾ ತಂಡದ ಎರಡನೇ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಮಿಥಾಲಿ 10868 ರನ್ ಸಿಡಿಸಿದ್ದಾರೆ.

ಇದಲ್ಲದೆ ಮಹಿಳಾ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರ್ತಿಯಾಗಿ ಅತ್ಯಧಿಕ 50+ ಸ್ಕೋರ್ ಗಳಿಸಿದ 3ನೇ ಆಟಗಾರ್ತಿ ಎನಿಸಿದ್ದಾರೆ. ನ್ಯೂಜಿಲೆಂಡ್​ನ ಸೂಜಿ ಬೇಟ್ಸ್​ ಏಕದಿನ ಕ್ರಿಕೆಟ್​​ನಲ್ಲಿ 32 ಬಾರಿ ಈ ಸಾಧನೆ ಮಾಡಿದ್ದಾರೆ.

116 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 6ನೇ ಶತಕ ದಾಖಲಿಸಿದ ಸ್ಮೃತಿ ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ, 1 ಸಿಕ್ಸರ್‌ ಇದೆ. ಅಲ್ಲದೆ ಭಾರತ ಮಹಿಳಾ ತಂಡದ ಪರ ಅಧಿಕ ಶತಕ ಸಿಡಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹರ್ಮನ್​ಪ್ರೀತ್ ಕೌರ್​ 5 ಶತಕ ಸಿಡಿಸಿದ್ದು, ಅವರನ್ನು ಸ್ಮೃತಿ ಹಿಂದಿಕ್ಕಿದ್ದಾರೆ. ಮಿಥಾಲಿ ರಾಜ್ 7 ಏಕದಿನ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments