Publish Date: Thu, 06 Oct 2022 (07:10 IST)
Updated Date: Thu, 06 Oct 2022 (07:45 IST)
ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ.
ಪ್ರಮುಖರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮುಂತಾದ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.
ಹೀಗಾಗಿ ಯುವ ಪ್ರತಿಭೆಗಳಿಗೆ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸಲು ವೇದಿಕೆ ಸಿಕ್ಕಂತಾಗಲಿದೆ. ಧವನ್ ಜೊತೆಗೆ ಶುಬ್ನಂ ಗಿಲ್ ತಂಡದ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಗಿಲ್ ಜಿಂಬಾಬ್ವೆ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಆದರೆ ಬಳಿಕ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ ಮುಂತಾದವರು ಬಲ ತುಂಬಲಿದ್ದಾರೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ ಕಮ್ ಬ್ಯಾಕ್ ಮಾಡಲಿದ್ದಾರೆ. ಅವರ ಜೊತೆಗೆ ಆವೇಶ‍್ ಖಾನ್, ರವಿ ಬಿಷ್ಣೋಯ್, ದೀಪಕ್ ಚಹರ್ ಸ‍್ಥಾನ ಪಡೆಯಬಹುದು. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.
-Edited by Rajesh Patil