ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಮುಗಿಸಿರುವ ಟೀಂ ಇಂಡಿಯಾ ಈಗ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಸರಣಿಗೆ ಸಿದ್ಧವಾಗಲಿದೆ. ಈ ಸರಣಿಯ ವೇಳಾಪಟ್ಟಿ, ಸಮಯದ ವಿವರ ಇಲ್ಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳನ್ನು ಟೀಂ ಇಂಡಿಯಾ ಆಡಲಿದೆ. ಎಲ್ಲಾ ಪಂದ್ಯಗಳೂ ಭಾರತದಲ್ಲೇ ನಡೆಯಲಿದೆ. ಮೊದಲು ಟೆಸ್ಟ್ ಸರಣಿ ನಡೆಯಲಿದ್ದು, ಒಟ್ಟು 2 ಪಂದ್ಯಗಳ ಸರಣಿಯನ್ನು ಭಾರತ ಆಡಲಿದೆ.
ಟೆಸ್ಟ್ ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ನವಂಬರ್ 14 ರಿಂದ 18 ರವರೆಗೆ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 9.30 ಕ್ಕೆ ಪಂದ್ಯ ಆರಂಭವಾಗಲಿದೆ.
ಎರಡನೇ ಪಂದ್ಯ ಗುವಾಹಟಿಯ ಬರ್ಸಾಪರ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ನವಂಬರ್ 22 ರಿಂದ 26 ರವರೆಗೆ ನಡೆಯಲಿದೆ. ಈ ಪಂದ್ಯವೂ ಬೆಳಿಗ್ಗೆ 9.30 ಕ್ಕೆ ಆರಂಭವಾಗುವುದು. ಶುಭಮನ್ ಗಿಲ್ ನೇತೃತ್ವದ ಬಲಿಷ್ಠ ಆಡುವ ಬಳಗವನ್ನು ಈಗಾಗಲೇ ಘೋಷಿಸಲಾಗಿದೆ. ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಅಥವಾ ಜಿಯೋ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ ತಂಡ ಇಂತಿದೆ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ದೇವದತ್ತ ಪಡಿಕ್ಕಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಕ್ಸರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜ್ಯುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್.