Select Your Language

Notifications

webdunia
webdunia
webdunia
webdunia

ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಹಗಲು-ರಾತ್ರಿ ಟೆಸ್ಟ್ ಪಂದ್ಯ?

ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಹಗಲು-ರಾತ್ರಿ ಟೆಸ್ಟ್ ಪಂದ್ಯ?
ಮುಂಬೈ , ಗುರುವಾರ, 3 ಫೆಬ್ರವರಿ 2022 (09:30 IST)
ಮುಂಬೈ: ಶ್ರೀಲಂಕಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ವಿರಾಟ್ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯ ಎನ್ನುವುದು ವಿಶೇಷವಾಗಿದೆ.

ಇನ್ನೊಂದು ವಿಶೇಷವೆಂದರೆ ಈ ಪಂದ್ಯವನ್ನು ಹಗಲು-ರಾತ್ರಿಯಾಗಿ ನಡೆಸಲು ಬಿಸಿಸಿಐ ಈಗ ಚಿಂತನೆ ನಡೆಸುತ್ತಿದೆಯಂತೆ. ಮೊಹಾಲಿ ಮತ್ತು ಬೆಂಗಳೂರಿನಲ್ಲಿ ಎರಡು ಟೆಸ್ಟ್ ಪಂದ್ಯ ನಡೆಯಲಿದೆ.

ಈ ಪೈಕಿ ಬೆಂಗಳೂರು ಪಂದ್ಯವನ್ನು ಹಗಲು-ರಾತ್ರಿಯಾಗಿ ಆಯೋಜಿಸುವುದು ಬಿಸಿಸಿಐ ಯೋಜನೆ. ಮೊಹಾಲಿಯಲ್ಲಿ ಇಬ್ಬನಿ ಕಾರಣದಿಂದ ಪಿಂಕ್ ಬಾಲ್ ಟೆಸ್ಟ್ ನಡೆಸುವುದು ಕಷ್ಟ. ಹೀಗಾಗಿ ಬೆಂಗಳೂರು ಪಂದ್ಯವನ್ನು ಹಗಲು-ರಾತ್ರಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಡರ್ 19 ವಿಶ್ವಕಪ್ ಕ್ರಿಕೆಟ್: ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಇಂದು