ಭಾರತ-ಶ್ರೀಲಂಕಾ ಏಕದಿನ ಸರಣಿ ಇಂದಿನಿಂದ: ಆರಂಭ ಸಮಯ, ಲೈವ್ ಮಾಹಿತಿ ಇಲ್ಲಿದೆ

Krishnaveni K
ಶುಕ್ರವಾರ, 2 ಆಗಸ್ಟ್ 2024 (09:01 IST)
ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಮೊದಲ ಪಂದ್ಯ ಇಂದು ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದರು. ಇದೀಗ ಇಬ್ಬರೂ ತಾರೆಯರು ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ನಾಯಕನಾಗಿ ರೋಹಿತ್ ಶರ್ಮಾ ಬ್ರೇಕ್ ಬಳಿಕ ಕಣಕ್ಕಿಳಿಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಗೌತಮ್ ಗಂಭೀರ್ ಕೋಚ್ ಆಗಿ ಅವರ ಜೊತೆ ಕಾರ್ಯನಿರ್ವಹಿಸಲಿದ್ದಾರೆ.

ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಯುವ ಪಡೆ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದೀಗ ಭಾರತ ಫುಲ್ ಸ್ಟ್ರೆಂಗ್ತ್ ತಂಡ ಏಕದಿನ ಸರಣಿ ಆಡುತ್ತಿದೆ. ರೋಹಿತ್, ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ನಂತಹ ಘಟಾನುಘಟಿ ಬ್ಯಾಟಿಗರು ತಂಡದಲ್ಲಿದ್ದಾರೆ. ಮುಂದಿನ ಚಾಂಪಿಯನ್ಸ್ ಟ್ರೋಫಿಗೆ ಮೊದಲು ಇದು ಅಭ್ಯಾಸದ ಸರಣಿ ಎಂದೇ ಪರಿಗಣಿಸಲಾಗಿದೆ.

ಬೌಲಿಂಗ್ ನಲ್ಲೂ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅರ್ಷ್ ದೀಪ್ ಸಿಂಗ್ ರಂತಹ ಪ್ರತಿಭಾವಂತರ ಪಡೆಯೇ ಇದೆ. ಭಾರತ ತಂಡವನ್ನು ನೋಡುತ್ತಿದ್ದರೆ ಶ್ರೀಲಂಕಾ ವಿರುದ್ಧ ಬ್ರಹ್ಮಾಸ್ತ್ರವನ್ನೇ ಸಿದ್ಧಪಡಿಸಿಕೊಂಡಿದೆ ಎನ್ನಬಹುದು. ಸದ್ಯದ ಪರಿಸ್ಥಿತಿ ಗಮನಿಸಿದರೆ ಏಕದಿನ ಸರಣಿಯನ್ನೂ ಭಾರತ ಕ್ಲೀನ್ ಸ್ವೀಪ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಏಕದಿನ ಪಂದ್ಯ ಅಪರಾಹ್ನ 2.30 ಕ್ಕೆ ಆರಂಭವಾಗಲಿದ್ದು, ಸೋನಿ ಲೈವ್ ನಲ್ಲಿ ನೇರಪ್ರಸಾರ ವಿಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments