Publish Date: Sat, 26 Feb 2022 (08:35 IST)
Updated Date: Sat, 26 Feb 2022 (08:48 IST)
ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ.
ಟೀಂ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದಿದ್ದು ಸರಣಿಯಲ್ಲಿ 1-0 ರಿಂದ ಮುನ್ನಡೆಯಲ್ಲಿದೆ. ಮೊದಲ ಪಂದ್ಯದಲ್ಲಿ ಲಂಕಾ ಆಟ ನೋಡಿದರೆ ಭಾರತ ಇಂದೇ ಸರಣಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ.
ಟೀಂ ಇಂಡಿಯಾ ಯುವ ಆಟಗಾರರು ಉತ್ತಮ ಫಾರ್ಮ್ ನಲ್ಲಿದ್ದು, ಎದುರಾಳಿ ಬೌಲರ್ ಗಳನ್ನು ಚೆಂಡಾಡಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ ತಂಡವೇ ಇಲ್ಲಿಯೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಂಜು ಸ್ಯಾಮ್ಸನ್ ಗೆ ಇಂದು ಅವಕಾಶ ಸಿಗುವ ಸಾಧ‍್ಯತೆ ಕಡಿಮೆ. ಋತುರಾಜ್ ಗಾಯಕ್ ವಾಡ್ ಕೈ ನೋವಿಗೊಳಗಾಗಿದ್ದು, ಒಂದು ವೇಳೆ ಅವರು ಚೇತರಿಸಿಕೊಂಡರೂ ಅವರು ಆಡುವ ಸಾಧ್ಯತೆ ಕಡಿಮೆ. ಬೌಲಿಂಗ್ ವಿಭಾಗದಲ್ಲಿ ಸಣ್ಣ ಪುಟ್ಟ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.