Select Your Language

Notifications

webdunia
webdunia
webdunia
webdunia

ಭಾರತ-ಶ್ರೀಲಂಕಾ ಟಿ20 ಸರಣಿ ಇಂದಿನಿಂದ ಶುರು

ಭಾರತ-ಶ್ರೀಲಂಕಾ ಟಿ20 ಸರಣಿ ಇಂದಿನಿಂದ ಶುರು
ಮುಂಬೈ , ಮಂಗಳವಾರ, 3 ಜನವರಿ 2023 (08:20 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.

ನಾಯಕರಾಗಿ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಕೊಹ್ಲಿ, ಕೆಎಲ್ ರಾಹುಲ್ ರಂತಹ ಅನುಭವಿಗಳನ್ನು ಬಿಟ್ಟು ಯುವ ಕ್ರಿಕೆಟಿಗರಿಗೆ ಮಣೆ ಹಾಕಲಾಗಿದೆ.

ಇಶಾನ್ ಕಿಶನ್, ಶುಬ್ನಂ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಹಾಗಿದ್ದಲ್ಲಿ ಋತುರಾಜ್ ಗಾಯಕ್ ವಾಡ್ ಬೆಂಚ್ ಕಾಯಿಸಬೇಕಾದೀತು. ಮಧ್ಯಮ ಕ್ರಮಾಂಕದಲ್ಲಿ ಇನ್ ಫಾರ್ಮ್ ಬ್ಯಾಟಿಗ ಸೂರ್ಯಕುಮಾರ್ ಯಾದವ್ ಇದ್ದಾರೆ. ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ನಡುವೆ ಪೈಪೋಟಿಯಿರಲಿದೆ. ಈ ವರ್ಷದ ಮೊದಲ ಸರಣಿ ಇದಾಗಿದ್ದು, ಶುಭಾರಂಭ ಮಾಡುವ ಉತ್ಸಾಹದಲ್ಲಿ ಟೀಂ ಇಂಡಿಯಾವಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7 ಗಂಟೆಗೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದುಬೈನಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹೊಸ ವರ್ಷಾಚರಣೆ