ಅಹಮದಾಬಾದ್: ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಜಸ್‌ಪ್ರೀತ್ ಬೂಮ್ರಾ ಅವರ ಬೆಂಕಿ ದಾಳಿಗೆ ವೆಸ್ಟ್ ಇಂಡೀಸ್ ಅಕ್ಷರಃ ತತ್ತರಿಸಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೇರಿಬಿಯನ್ ತಂಡವು ಭಾರತದ ದಾಳಿಗೆ ಕುಸಿದಿದೆ. 44.1 ಓವರ್‌ಗಳಲ್ಲಿ 162 ರನ್‌ಗೆ ಆಲೌಟ್ ಆಗಿದೆ.
ಭೋಜನ ವಿರಾಮದ ವೇಳೆಗೆ 90 ರನ್‌ಗೆ 5 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ ಪಡೆಗೆ ಚೇತರಿಕೊಳ್ಳಲು ಭಾರತದ ಬೌಲರ್‌ಗಳು ಅವಕಾಶ ನೀಡಲಿಲ್ಲ.
ಸಿರಾಜ್ 40 ರನ್‌ಗೆ ನಾಲ್ಕು ವಿಕೆಟ್ ಪಡೆದರೆ, ಬೂಮ್ರಾ 42 ರನ್‌ಗೆ ಮೂರು ವಿಕೆಟ್ ಕಬಳಿಸಿದರು. ಸ್ಪಿನ್ನರ್ ಕುಲದೀಪ್ ಯಾದವ್ ಎರಡು ವಿಕೆಟ್ ಪಡೆದರು. ವಿಂಡೀಸ್ ಪರ ಜಸ್ಟಿನ್ ಗ್ರೀವ್ಸ್ 32 ರನ್ ಗಳಿಸಿ ಗರಿಷ್ಠ ಸ್ಕೋರ್ ಎನಿಸಿಕೊಂಡರು.
ಭಾರತದ ತಂಡ: ಶುಭಮನ್ ಗಿಲ್ (ನಾಯಕ), ಕೆ.ಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ತೇಜ್ ನರಾಯಣ್ ಚಂದ್ರಪಾಲ್, ಜಾನ್ ಕ್ಯಾಂಪ್‌ಬೆಲ್, ಅಲಿಕ್ ಅಥಾಂಜೆ, ಬ್ರಾಂಡನ್ ಕಿಂಗ್, ಶಾಯ್ ಹೋಪ್, ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೈನ್, ಜೇಡನ್ ಸೀಲ್ಸ್.