Publish Date: Wed, 27 Jul 2022 (08:00 IST)
Updated Date: Wed, 27 Jul 2022 (08:37 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯಲಿದೆ.
ಈಗಾಗಲೇ ಟೀಂ ಇಂಡಿಯಾ ಎರಡೂ ಪಂದ್ಯಗಳನ್ನು ಗೆದ್ದಿರುವುದರಿಂದ ಸರಣಿ ಕೈ ವಶವಾಗಿದೆ. ಹೀಗಾಗಿ ಮೂರನೇ ಪಂದ್ಯಕ್ಕೆ ಮಹತ್ವವಿಲ್ಲದಂತಾಗಿದೆ. ಹಾಗಿದ್ದರೂ ವೈಟ್ ವಾಶ್ ಗೌರವ ಪಡೆಯಲು ಟೀಂ ಇಂಡಿಯಾ ಪ್ರಯತ್ನಿಸಲಿದೆ.
ಈ ಪಂದ್ಯದಲ್ಲಿ ಭಾರತ ಇದುವರೆಗೆ ಅವಕಾಶ ಸಿಗದ ಆಟಗಾರರನ್ನು ಕಣಕ್ಕಿಳಿಸಿದರೂ ಅಚ್ಚರಿಯಿಲ್ಲ. ಇಶಾನ್ ಕಿಶನ್, ಋತುರಾಜ್ ಗಾಯಕ್ ವಾಡ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಜೊತೆಗೆ ಕಳೆದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ವೇಗಿ ಆವೇಶ್ ಖಾನ್ ನಿರೀಕ್ಷಿಸಿದಂತೆ ಪ್ರದರ್ಶನ ನೀಡಿರಲಿಲ್ಲ. ಜೊತೆಗೆ ಹೀಗಾಗಿ ಅರ್ಷ್ ದೀಪ್ ಸಿಂಗ್ ಅವಕಾಶ ಪಡೆದರೂ ಅಚ್ಚರಿಯಿಲ್ಲ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.