Publish Date: Thu, 27 Jul 2023 (08:20 IST)
Updated Date: Thu, 27 Jul 2023 (08:48 IST)
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.
ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಈಗ ಏಕದಿನ ಸರಣಿ ಗೆಲ್ಲುವ ಗುರಿ ಹಾಕಿಕೊಂಡಿದೆ. ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಟೀಂ ಇಂಡಿಯಾಗೆ ಈ ಸರಣಿ ಮಹತ್ವದ್ದಾಗಿದೆ.
ಭಾರತದ ಪರ ಇಂದು ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಶುಬ್ಮನ್ ಗಿಲ್ ಕಣಕ್ಕಿಳಿಯಬಹುದು. ಆದರೆ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಪೈಪೋಟಿಯಿರಲಿದೆ. ಇಬ್ಬರಲ್ಲಿ ಯಾರು ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ ಕಾದು ನೋಡಬೇಕು. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಕಣಕ್ಕಿಳಿಯಬಹುದು. ಟೆಸ್ಟ್ ಸರಣಿಯಲ್ಲಿ ಆಡಿದ ಪಿಚ್ ನನ್ನು ಗಮನಿಸಿದರೆ ಭಾರತ ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.