Publish Date: Thu, 20 Jul 2023 (08:20 IST)
Updated Date: Thu, 20 Jul 2023 (08:42 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಈಗಾಗಲೇ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಇನಿಂಗ್ಸ್ ಮತ್ತು 141 ರನ್ ಗಳ ಅಂತರದಿಂದ ಗೆದ್ದುಕೊಂಡಿತ್ತು. ಎರಡು ಟೆಸ್ಟ್ ಪಂದ್ಯಗಳ ಸರಣಿ ಇದಾಗಿದ್ದು, ಈ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಭಾರತದ ಪಾಲಾಗಲಿದೆ.
ಆದರೆ ಎರಡೂ ತಂಡಗಳ ಬಲಾಬಲ ನೋಡಿದರೆ ಟೀಂ ಇಂಡಿಯಾವೇ ಮೇಲುಗೈ ಹೊಂದಿದೆ. ವಿಂಡೀಸ್ ಬ್ಯಾಟಿಂಗ್ ಭಾರತದ ಬೌಲಿಂಗ್ ಎದುರು ಕಳೆದ ಪಂದ್ಯದಲ್ಲಿ ಸಂಪೂರ್ಣವಾಗಿ ಹಳಿ ತಪ್ಪಿತ್ತು. ಈ ಪಂದ್ಯದಲ್ಲಿ ಭಾರತ ಕೆಲವು ಬದಲಾವಣೆ ಮಾಡುವ ನಿರೀಕ್ಷೆಯಿದೆ. ಏನೇ ಬದಲಾವಣೆ ಮಾಡಿದರೂ ಭಾರತವೇ ಪ್ರಬಲ ಎನ್ನುವುದನ್ನು ಮರೆಯುವಂತಿಲ್ಲ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ಕ್ಕೆ ಆರಂಭವಾಗುವುದು.