Publish Date: Thu, 20 Jul 2023 (20:58 IST)
Updated Date: Thu, 20 Jul 2023 (21:02 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ.
ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 87 ರನ್ ಗಳಿಸಿದೆ.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ-ಯಶಸ್ವಿ ಜೈಸ್ವಾಲ್ ಆರಂಭದಲ್ಲಿ ನಿಧಾನಗತಿಯ ಆಟವಾಡಿ ಪಿಚ್ ಗೆ ಹೊಂದಿಕೊಳ್ಳುತ್ತಿದ್ದಂತೇ ಕೆಲವು ಉತ್ತಮ ಶಾಟ್ ಗಳ ಮೂಲಕ ರನ್ ಗತಿ ಹೆಚ್ಚಿಸಿದರು. ರೋಹಿತ್ 48, ಯಶಸ್ವಿ ಜೈಸ್ವಾಲ್ 34 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.