ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಟ್ರಿನಿಡಾಡ್ ನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.
ವಿರಾಟ್ ಕೊಹ್ಲಿ ಹೊರತುಪಡಿಸಿ ಹಿರಿಯ ಆಟಗಾರರೆಲ್ಲಾ ತಂಡವನ್ನು ಕೂಡಿಕೊಳ್ಳುತ್ತಿದ್ದಾರೆ. ಏಕದಿನ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅವರ ಜೊತೆಗೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ವೇಗಿ ಭುವನೇಶ್ವರ್ ಕುಮಾರ್, ವಿಕೆಟ್ ಕೀಪರ್ ರಿಷಬ್ ಪಂತ್, ದಿನೇಶ್ ಕಾರ್ತಿಕ್ ತಂಡದಲ್ಲಿರಲಿದ್ದಾರೆ.
ಏಕದಿನ ಸರಣಿಯಲ್ಲಿ ಮೂರೂ ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಗಮನಿಸಬೇಕಾದ ಅಂಶವೆಂದರೆ ಏಕದಿನ ಸರಣಿಯಲ್ಲೇ ಟ್ರಿನಿಡಾಡ್ ಮೈದಾನದಲ್ಲಿ ಬ್ಯಾಟರ್ ಗಳು ಅಬ್ಬರಿಸಿದ್ದರು. ಹೀಗಾಗಿ ಟಿ20 ಸರಣಿಯಲ್ಲೂ ಹಿಟ್ ಮ್ಯಾನ ರೋಹಿತ್ ಸಿಡಿಯಬಹುದು, ಭಾರತ ಭರ್ಜರಿ ಮೊತ್ತ ಕಲೆ ಹಾಕಬಹುದು ಎಂಬ ನಿರೀಕ್ಷೆಯಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.