ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದ್ದು, ಯಶಸ್ವಿ ಜೈಸ್ವಾಲ್ ಭಾರತದ ಪರ ಪಾದಾರ್ಪಣೆ ಮಾಡಿದ್ದಾರೆ.
ಕಳೆದ ಎರಡು ಪಂದ್ಯಗಳನ್ನೂ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ರವಿ ಬಿಷ್ಣೋಯ್ ಅವರನ್ನು ಹೊರಗಿಟ್ಟು ಈ ಪಂದ್ಯದಲ್ಲಿ ಹೊಡೆಬಡಿಯ ಆರಂಭಿಕ ಯಶಸ್ವಿ ಜೈಸ್ವಾಲ್ ಗೆ ಅವಕಾಶ ನೀಡಲಾಗಿದೆ.
ಇಂದು ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ 7 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿದೆ. ಕೈಲ್ ಮೇಯರ್ಸ್ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಒಂದು ವಿಕೆಟ್ ಅಕ್ಸರ್ ಪಟೇಲ್ ಪಾಲಾಗಿದೆ.