Select Your Language

Notifications

webdunia
webdunia
webdunia
webdunia

ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ ವನಿತೆಯರು

ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ ವನಿತೆಯರು
ಪಲ್ಲಿಕೆಲೆ , ಸೋಮವಾರ, 4 ಜುಲೈ 2022 (16:15 IST)
ಪಲ್ಲಿಕೆಲೆ: ಭಾರತ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 10 ವಿಕೆಟ್ ಗಳಿಂದ ಗೆದ್ದ ಭಾರತ ಮಹಿಳಾ ತಂಡ 3 ಪಂದ್ಯಗಳ ಸರಣಿ ತನ್ನದಾಗಿಸಿಕೊಂಡಿದೆ.

ಕಳೆದ ಪಂದ್ಯವನ್ನೂ ಭಾರತ ಗೆದ್ದುಕೊಂಡಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವು ಸಾಧಿಸಿದೆ. ಹೀಗಾಗಿ ಹರ್ಮನ್ ಪ್ರೀತ್ ಕೌರ್ ಪಡೆ ಇನ್ನೂ ಪಂದ್ಯ ಬಾಕಿಯಿರುವಾಗಲೇ ಸರಣಿ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 50 ಓವರ್ ಗಳಲ್ಲಿ 173 ರನ್ ಗಳಿಗೆ ಆಲೌಟ್ ಆಗಿತ್ತು. ಭಾರತದ ಪರ ರೇಣುಕಾ ಸಿಂಗ್ 4 ವಿಕೆಟ್ ಕಬಳಿಸಿದರೆ ಮೇಘನಾ ಸಿಂಗ್ ಮತ್ತು ದೀಪ್ತಿ ಶರ್ಮಾ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು. ಈ ಮೊತ್ತ ಬೆನ್ನತ್ತಿದ ಭಾರತ 25.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 174 ರನ್ ಗಳಿಸಿತು. ಶಫಾಲಿ ವರ್ಮ ಅಜೇಯ 71, ಸ್ಮೃತಿ ಮಂಥನಾ ಅಜೇಯ 94 ರನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಇದಕ್ಕೇ ಲಾಯಕ್ಕು! ಟ್ರೋಲ್ ಆದ ವಿರಾಟ್ ಕೊಹ್ಲಿ