Publish Date: Sun, 26 Sep 2021 (16:59 IST)
Updated Date: Sun, 26 Sep 2021 (17:00 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಏಕದಿನ ಪಂದ್ಯದಲ್ಲಿ ಭಾರತ ವನಿತೆಯರ ತಂಡ 2 ವಿಕೆಟ್ ಗಳಿಂದ ರೋಚಕವಾಗಿ ಪಂದ್ಯ ಗೆದ್ದುಕೊಂಡಿದೆ.
ಈಗಾಗಲೇ ಎರಡು ಪಂದ್ಯದಲ್ಲಿ ಸೋತಿದ್ದ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಮೂರನೇ ಏಕದಿನ ಪಂದ್ಯವನ್ನು ಗೆದ್ದು ಬೀಗಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಅಗ್ರ ಮೂರು ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಉತ್ತಮ ಆರಂಭ ನೀಡಿದರು. ಶಫಾಲಿ ವರ್ಮ 56, ಸ್ಮೃತಿ ಮಂಥನಾ 22, ಯಶಿಕಾ ಭಾಟಿಯಾ 64 ರನ್ ಗಳಿಸಿದರು. ಇದರಿಂದಾಗಿ ಭಾರತ 49.3 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 266 ರನ್ ಗಳಿಸಿ ಗೆಲುವಿನ ನಗೆ ಬೀರಿತು.