Webdunia - Bharat's app for daily news and videos

Install App

ನೋಲಾಸ್‌ಗೆ ಜಯಗಳಿಸಿದ ಭಾರತ : ಜಿಂಬಾಬ್ವೆ ಕ್ಲೀನ್ ಸ್ವೀಪ್

Webdunia
ಬುಧವಾರ, 15 ಜೂನ್ 2016 (18:16 IST)
ಭಾರತ ಜಿಂಬಾಬ್ವೆ ವಿರುದ್ಧ ನಡೆದ ಮೂರನೇ ಏಕ ದಿನ ಪಂದ್ಯದಲ್ಲಿ ನೋಲಾಸ್‌ನಿಂದ ಜಯಗಳಿಸುವ ಮೂಲಕ 3-0 ಯಿಂದ ಜಿಂಬಾಬ್ವೆ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದೆ. ಭಾರತ ಜಿಂಬಾಬ್ವೆಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಎರಡನೇ ಸಾಲಿನ ಆಟಗಾರರನ್ನು ಕಳಿಸಿತ್ತು. ಆದರೂ ಜಿಂಬಾಬ್ವೆ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ ಮೂರು ಪಂದ್ಯಗಳನ್ನು ಸೋತು  ವೈಟ್ ವಾಷ್ ಆಗಿದೆ.

 ಮೊದಲಿಗೆ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡವು ಬುಮ್ರಾ ಅವರ ವೇಗದ ಬೌಲಿಂಗ್ ದಾಳಿಗೆ ಬಲಿಯಾಗಿ  123 ರನ್‌ಗಳಿಗೆ ಆಲೌಟ್ ಆಗಿತ್ತು. ಬುಮ್ರಾ, ಚಿಗುಂಬರಾ, ಚಿಬಾಬಾ ಮುಂತಾದ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದರು. ಚಹಲ್ 2 ವಿಕೆಟ್ ಕಬಳಿಸಿದರು.

ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ಲೋಕೇಶ್ ರಾಹುಲ್ 70 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರು ಮತ್ತು ಚೊಚ್ಚಲ ಪ್ರವೇಶ ಮಾಡಿರುವ ಫೈಜ್ ಫಜಲ್ 61 ಎಸೆತಗಳಲ್ಲಿ 55 ರನ್ ಮಾಡಿ ಅಜೇಯರಾಗಿ ಉಳಿದರು. ಭಾರತ ಕೇವಲ 21. 5 ಓವರುಗಳಲ್ಲಿ ಜಿಂಬಾಬ್ವೆ ಗಡಿಯನ್ನು ನೋಲಾಸ್‌ಗೆ ದಾಟುವ ಮೂಲಕ ಮೂರು ಪಂದ್ಯಗಳಲ್ಲಿ ಗೆದ್ದು ಕ್ಲೀನ್ ಸ್ವೀಪ್ ಮಾಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments