Webdunia - Bharat's app for daily news and videos

Install App

ರೋಹಿತ್ ಶರ್ಮಾ ಆರ್ಭಟಕ್ಕೆ ಆಸೀಸ್ ಉಡೀಸ್: ಸರಣಿ ಗೆದ್ದು ಬೀಗಿದ ಟೀಮ್ ಇಂಡಿಯಾ

Webdunia
ಸೋಮವಾರ, 2 ಅಕ್ಟೋಬರ್ 2017 (08:18 IST)
ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಏಕದಿನ ಪಂದ್ಯವನ್ನೂ ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡ 4-1 ಅಂತರದಿಂದ ಏಕದಿನ ಸರಣಿ ಗೆದ್ದು ಬೀಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 4ನೇ ಪಂದ್ಯದಲ್ಲಿ ಭಾರತವನ್ನ ಸೋಲಿಸಿದ್ದ ಹುಮ್ಮಸ್ಸಿನಲ್ಲೇ ಬೃಹತ್ ಮೊತ್ತದ ಗುರಿ ಹೊಂದಿತ್ತು. ಆದರೆ, ಭಾರತದ ಶಿಸ್ತು ಬದ್ಧ ಬೌಲಿಂಗ್ ದಾಳಿಗೆ ಕಾಂಗರೂ ಬ್ಯಾಟ್ಸ್`ಮನ್`ಗಳು ನೆಲಕಚ್ಚಿದರು. ಆರಂತಕ ಸಿಡಿಸಿ ಉತ್ತಮ ಾರಂಭ ಒದಗಿಸಿದರು. ಆನಂತರ ಪಟಪಟನೆ ವಿಕೆಟ್ ಉರುಳಿದ್ದರಿಂದ ಆಸೀಸ್`ಗೆ ಹಿನ್ನಡೆಯಾಯಿತು. ಬಳಿಕ ಸ್ಟೋಯ್ನಿಸ್ ಮತ್ತು ಟ್ರ್ಯಾವಿಸ್ ಹೆಡ್ ತಂಡದ ಬೃಹತ್ ಮೊತ್ತಕ್ಕೆ ಪ್ರಯತ್ನ ನಡೆಸಿದರೂ ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಸೀಸ್ 50 ಓವರ್`ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಲಷ್ಟೇ ಶಕ್ತವಾಯ್ತು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಅಜಿಂಕ್ಯ ರಹಾನೆಯವರ ಯಶಸ್ವಿ ಆರಂಭಿಕ ಜೋಡಿ 124 ರನ್`ಗಳ ಜೊತೆಯಾಟ ನೀಡಿತು. ರಹಾನೆ 61 ರನ್`ಗೆ ನಿರ್ಗಮಿಸಿದ ಬಳಿಕ ರೋಹಿತ್ ಶರ್ಮಾ ಆರ್ಭಟ ಮುಂದುವರೆಸಿದರು. 109 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 11 ಬೌಂಡರಿ ಸಹಿತ 125 ರನ್ ಸಿಡಿಸಿದ ರೋಹಿತ್ ಶರ್ಮಾ ಆಸೀಸ್ ಬೌಲರ್`ಗಳ ಬೆವರಿಳಿಸಿದರು. ನಾಯಕ ಕೊಹ್ಲಿ ಸಹ 39 ರನ್ ಗಳಿಸಿ ರೋಹಿತ್`ಗೆಸಾಥ್ ನೀಡಿದರು. ಅಂತಿಮವಾಗಿ ಭಾರತ ತಂಡ 42.5 ಓವರ್`ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.  ಅರ್ಹವಾಗಿಯೇ ರೋಹಿತ್ ಶರ್ಮಾಗೆ ಪಂದ್ರ ಶ್ರೇಷ್ಠ ಮತ್ತು ಹಾರ್ದಿಕ್ ಪಾಂಡ್ಯಾಗೆ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments