ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದ ವೇಳೆ ಭಾರತೀಯ ಪ್ರೇಕ್ಷಕರ ಮೇಲೆ ಜನಾಂಗೀಯ ನಿಂದನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಕೆಲವು ಭಾರತೀಯ ಪ್ರೇಕ್ಷಕರು ಸಾಮಾಜಿಕ ಜಾಲತಾಣದ ಮೂಲಕ ಅಳಲು ತೋಡಿಕೊಂಡಿದ್ದರು. ಕೆಲವು ದುಷ್ಕರ್ಮಿಗಳ ಗುಂಪು ನಮ್ಮನ್ನು ಟಾರ್ಗೆಟ್ ಮಾಡಿದ್ದರು ಎಂದಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಎಡ್ಜ್ ಬಾಸ್ಟನ್ ಮೈದಾನದ ಅಧಿಕಾರಿಗಳು ಜನಾಂಗೀಯ ನಿಂದನೆ ಮಾಡಿದವರ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿದೆ.