Select Your Language

Notifications

webdunia
webdunia
webdunia
webdunia

ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ

Fast Bowler Jasprit Bumrah

Sampriya

ಮೆಲ್ಬರ್ನ್ , ಭಾನುವಾರ, 29 ಡಿಸೆಂಬರ್ 2024 (10:20 IST)
Photo Courtesy X
ಮೆಲ್ಬರ್ನ್: ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಬೂಮ್ರಾ ಸ್ಮರಣೀಯ ಸಾಧನೆ ಮಾಡಿದರು.

ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದ ಬೂಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ 200ನೇ ವಿಕಟ್ ಗಳಿಸಿದರು. 44ನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ಈ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಬೂಮ್ರಾ ಭಾಜನರಾಗಿದ್ದಾರೆ. ಒಟ್ಟಾರೆಯಾಗಿ ಜಸ್‌ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಗಳಿಸಿದ ಭಾರತದ 12ನೇ ಬೌಲರ್ ಎನಿಸಿದ್ದಾರೆ.

200 ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಬೂಮ್ರಾ ಅತ್ಯುತ್ತಮ ಬೌಲಿಂಗ್ ಸರಾಸರಿಯನ್ನು (19.56) ಕಾಪಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್‌ಇಂಡೀಸ್‌ನ ಮಾರ್ಷಲ್ (20.94) ದಾಖಲೆಯನ್ನು ಮೀರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಚೊಚ್ಚಲ ಶತಕ: ನಿತೀಶ್‌ ಕುಮಾರ್‌ ರೆಡ್ಡಿಗೆ ₹25 ಲಕ್ಷ ಬಹುಮಾನ ಘೋಷಿಸಿದ ಆಂಧ್ರ