Webdunia - Bharat's app for daily news and videos

Install App

ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ

Sampriya
ಭಾನುವಾರ, 29 ಡಿಸೆಂಬರ್ 2024 (10:20 IST)
Photo Courtesy X
ಮೆಲ್ಬರ್ನ್: ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಬೂಮ್ರಾ ಸ್ಮರಣೀಯ ಸಾಧನೆ ಮಾಡಿದರು.

ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದ ಬೂಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ 200ನೇ ವಿಕಟ್ ಗಳಿಸಿದರು. 44ನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ಈ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಬೂಮ್ರಾ ಭಾಜನರಾಗಿದ್ದಾರೆ. ಒಟ್ಟಾರೆಯಾಗಿ ಜಸ್‌ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಗಳಿಸಿದ ಭಾರತದ 12ನೇ ಬೌಲರ್ ಎನಿಸಿದ್ದಾರೆ.

200 ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಬೂಮ್ರಾ ಅತ್ಯುತ್ತಮ ಬೌಲಿಂಗ್ ಸರಾಸರಿಯನ್ನು (19.56) ಕಾಪಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್‌ಇಂಡೀಸ್‌ನ ಮಾರ್ಷಲ್ (20.94) ದಾಖಲೆಯನ್ನು ಮೀರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments