ಗುವಾಹಟಿ: ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ಸರಣಿ ಬಳಿಕ ಇದೀಗ ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗಿವೆ. ರೋಹಿತ್ ಶರ್ಮಾ ನಾಯಕರಾಗಿದ್ದಾರೆ.
ಈ ಸರಣಿಗೆ ಟೀಂ ಇಂಡಿಯಾ ಸೀನಿಯರ್ ಆಟಗಾರರು ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ತಂಡಕ್ಕೆ ವಾಪಸಾಗುತ್ತಿದ್ದಾರೆ.
ಜಸ್ಪ್ರೀತ್ ಬುಮ್ರಾ ಹಲವು ತಿಂಗಳುಗಳ ಬಳಿಕ ತಂಡಕ್ಕೆ ವಾಪಸಾಗಬೇಕಿತ್ತು. ಆದರೆ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ರೋಹಿತ್ ಕೂಡಾ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಬಂದಿದ್ದಾರೆ.