Publish Date: Thu, 06 Jul 2017 (08:41 IST)
Updated Date: Thu, 06 Jul 2017 (08:44 IST)
ಲಂಡನ್: ನಿರೀಕ್ಷೆಯಂತೇ ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಕ್ರಿಕೆಟ್ ಕೂಟದ ಗ್ರೂಪ್ ಹಂತದಲ್ಲಿ ಶ್ರೀಲಂಕಾ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ತನ್ನ ಸೆಮಿಫೈನಲ್ ಸ್ಥಾನವನ್ನು ಭದ್ರಗೊಳಿಸಿದೆ.
ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರು ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿತು. ನಾಯಕಿ ಮಿಥಾಲಿ ರಾಜ್, ದೀಪ್ತಿ ಅತ್ಯುತ್ತಮ ಆಟವಾಡಿದರು. ಇಬ್ಬರೂ ಅರ್ಧಶತಕ ಗಳಿಸಿ ಮಿಂಚಿದರು.
ನಂತರ ಬ್ಯಾಟ್ ಮಾಡಿದ ಲಂಕಾ ನಿಗದಿತ 50 ಓವರ್ ಗಳಲ್ಲಿ 216 ರನ್ ಗಳಿಗೆ 7 ವಿಕೆಟ್ ಗಳಿಸಲಷ್ಟೇ ಶಕ್ತವಾಯಿತು. ಮೊನ್ನೆಯ ಪಂದ್ಯದಲ್ಲಿ ಮಿಂಚಿದ್ದ ಏಕ್ತಾ ಬಿಶ್ತ್ ಹಾಗೂ ದೀಪ್ತಿ ಶರ್ಮಾ ತಲಾ 1 ವಿಕೆಟ್ ಗಳಿಸಲಷ್ಟೇ ಶಕ್ತವಾದರು. ಜೂಲನ್ ಗೋಸ್ವಾಮಿ, ಪೂನಂ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ಮುಂದಿನ ಪಂದ್ಯದಲ್ಲಿ ಭಾರತ ದ.ಆಫ್ರಿಕಾ ತಂಡವನ್ನು ಎದುರಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ