ಢಾಕಾ: ಭಾರತ ಮತ್ತು ಬಾಂಗ್ಲಾದೇಶ ವನಿತೆಯರ ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯವನ್ನು ಭಾರತ ರೋಚಕವಾಗಿ 8 ರನ್ ಗಳಿಂದ ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್ ಪಡೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 95 ರನ್ ಗಳಿಸಿತು. ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ 13, ಶಫಾಲಿ ವರ್ಮ 19 ರನ್ ಗಳಿಸಿದರು. ಮಧ್ಯಮ ಕ್ರಮಾಂಕ ಸಂಪೂರ್ಣವಾಗಿ ಕೈ ಕೊಟ್ಟಿತು. ನಾಯಕಿ ಹರ್ಮನ್ ಶೂನ್ಯಕ್ಕೆ ನಿರ್ಗಮಿಸಿದರೆ ಜೆಮಿಮಾ ರೊಡ್ರಿಗಸ್ 8, ಯಶಿಕಾ ಭಾಟಿಯಾ 11, ಹರ್ಲಿನ್ ಡಿಯೋಲ್ 6, ದೀಪ್ತಿ ಶರ್ಮಾ 10 ರನ್ ಗಳಿಸಿದರು. ಅಮನ್ಜೋತ್ 14 ರನ್ ಗಳಿಸಿದರು.
ಈ ಮೊತ್ತ ಬೆನ್ನತ್ತಿದ ಬಾಂಗ್ಲಾ 20 ಓವರ್ ಗಳಲ್ಲಿ 87 ರನ್ ಗಳಿಗೆ ಆಲೌಟ್ ಆಗುವ ಮೂಲಕ ವೀರೋಚಿತ ಸೋಲು ಅನುಭವಿಸಿತು. ನಾಯಕಿ ನಿಗರ್ ಸುಲ್ತಾನಾ 38 ರನ್ ಗಳಿಸಿದ್ದು ಬಿಟ್ಟರೆ ಉಳಿದೆಲ್ಲಾ ಬ್ಯಾಟಿಗರದ್ದು ಏಕಂಕಿ ಕೊಡುಗೆ. ಭಾರತದ ಪರ ದೀಪ್ತಿ ಶರ್ಮ, ಶಫಾಲಿ ವರ್ಮ ತಲಾ 3 ವಿಕೆಟ್ ಕಬಳಿಸಿದರು. ಇದರೊಂದಿಗೆ ಭಾರತ 2-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿತು.